ಸಂಬಲ್‍ಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿದ ಪರಿಣಾಮ ಏಳು ಮಂದಿ ದುರ್ಮರಣಕ್ಕೀಡಾಗಿರುವ
ಘಟನೆ ಇಂದು ಮುಂಜಾನೆ ಒಡಿಶಾದ ಸಂಬಲ್‍ಪುರ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೊಲೆರೊ ಕಾರು ಆಯ ತಪ್ಪಿ ಪರಮನ್‍ಪುರ ಬಳಿ ಘಾಮ್ ಕಾಲುವೆಗೆ ಬಿದ್ದಿದೆ.
ಕಾರಿನಲ್ಲಿದ್ದವರು ಪರಮನ್‍ಪುರದಲ್ಲಿ ಮದುವೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಂಡು ಮರಳುತ್ತಿದ್ದರು.
ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರೂ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
Leave a Review