ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ನಡೆಸಿದ್ದ ಸಂಬಂಧ 7 ಮಂದಿ ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಮಂದಿ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳು ಡೀಗರ್ ಅಲಿಯಾಸ್ ಧನಂಜಯ್ ಎಂಬ ಯುವಕನ ಮೇಲೆ ದೊಣ್ಣೆ, ಕಲ್ಲು, ಬೆಲ್ಟ್, ಕ್ರೇಟ್ನಿಂದ ಹಲ್ಲೆ ಮಾಡಿದ್ದರು. ಅರೆಬೆತ್ತಲು ಮಾಡಿ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು.
ಹೋಟೆಲ್ ಮ್ಯಾನೇಜರ್ ದೂರಿನ ಮೇರೆಗೆ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಆರೋಪಿಗಳು ಮತ್ತು ಹಲ್ಲೆಗೊಳಗಾದ ಧನಂಜಯ್ ಎಲ್ಲರೂ ಹೋಟೆಲ್ನಲ್ಲಿ ಕೆಲಸ ಮಾಡ್ತಿದ್ದರು. ಹಲ್ಲೆಗೊಳಗಾದ ಯುವಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ.