ಬೆಂಗಳೂರು: ಹೊಸವರ್ಷದ ಸಂಭ್ರಮಾಚರಣೆ ವೇಳೆ ನಗರದ ಸಂಚಾರ ಪೊಲೀಸರು ಕಾರ್ಯಾಚರಣೆ ಕೈಗೊಂಡು 717 ಪಾನಮತ್ತ ಚಾಲನೆ ಪ್ರಕರಣಗಳನ್ನು ದಾಖಲಿಸಿದ್ದಾರೆ.ಡಿಸೆಂಬರ್ 21 ರಿಂದ, ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ನಡೆದ ವಾಹನ ಚಾಲಕರು ಮತ್ತು ದ್ವಿಚಕ್ರ ವಾಹನ ಚಾಲಕರ ತಪಾಸಣೆ ವೇಳೆ 717 ಪಾನಮತ್ತ ಪ್ರಕರಣಗಳು ಪತ್ತೆಯಾಗಿವೆ.
ಸಂಚಾರ ಪೊಲೀಸರು ನಗರದ ನಾಲ್ಕು ವಿಭಾಗಗಳಲ್ಲಿ ತಪಾಸಣೆ ನಡೆಸಿದ್ದು ಡಿಸೆಂಬರ್ 30 ರವರೆಗೆ 27,280 ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಿದ್ದಾರೆ. ಮತ್ತು ಹಲವೆಡೆ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿದ್ದು ಕಂಡು ಬಂದಿದೆ. 30mg/100mಟ ಕಾನೂನುಬದ್ಧ ರಕ್ತದ ಆಲ್ಕೋಹಾಲ್ ಸಾಂದ್ರತೆಯ (ಬಿಎಸಿ) ಮಿತಿಯನ್ನು ಉಲ್ಲಂಘಿಸಿದ ಒಟ್ಟು 717 ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ದಕ್ಷಿಣ ವಿಭಾಗವೊಂದರಲ್ಲೇ ಡಿ.29ರವರೆಗೆ ಸಂಚಾರ ಪೊಲೀಸರು 4,381 ವಾಹನಗಳ ತಪಾಸಣೆ ನಡೆಸಿ 167 ಪಾನ ಮತ್ತ ಚಾಲಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸ್ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿವೆ.
ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ಪೊಲೀಸ್ ಮಿತಿಯಲ್ಲೇ 154 ವಾಹನಗಳನ್ನು ಪರಿಶೀಲಿಸಿದ್ದು 30 ಪ್ರಕರಣಗಳು ದಾಖಲಾಗಿವೆ. ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆ, ದಕ್ಷಿಣದ ಟ್ರಾಫಿಕ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್ 20 ಮತ್ತು 29 ರ ನಡುವೆ ಕೇವಲ 41 ವಾಹನಗಳನ್ನು ಪರಿಶೀಲಿಸಲಾಗಿದ್ದು, 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಸುಮಾರು 44% ಚಾಲಕರು ಕಾನೂನು ಉಲ್ಲಂಘಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.