ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾನ ಬೆಂಗಳೂರು ಘಟಕವು ತನ್ನ 75ನೇ ವರ್ಷದ ಸಂಸ್ಥಾಪನ ದಿನವನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ.ಶೋಭಾ ಜಿ ಯವರು ಉದ್ಘಾಟಿಸಿದರು. ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬೆಂಗಳೂರು ಶಾಖೆಯ ಅಧ್ಯಕ್ಷರು ಮತ್ತು ಸ್ತ್ರಿರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ ರವರು ಸಂಸ್ಥೆಯು ನಡೆದು ಬಂದ ದಾರಿ ಕುರಿತು ಮಾಹಿತಿಯನ್ನು ನೀಡಿದರು.
ಈ ಸಮಾರಂಭದಲ್ಲಿ ಸೆಂಟ್ರಲ್ ಬ್ಯಾಂಕ್ ಅಫ್ ಇಂಡಿಯಾದ ಬೆಂಗಳೂರು ಪ್ರಾದೇಶಿಕ ಕಛೇರಿಯ ಮುಖ್ಯಸ್ಥ ಶ್ರೀ ಕೆ ಪಾರ್ಥಸಾರಥಿ ನಾಯ್ಡು ಮತ್ತು ಸಂಸ್ಥೆಯ ನಿವೃತ್ತ ಅಧ್ಯಕ್ಷೆ ಶ್ರೀಮತಿ ಶಾಂತಾ ಆರ್ ಬಾಳಿಗಾ ರವರು ಉಪಸ್ಥಿತರಿದ್ದರು.ಈ ಶುಭ ಸಂದರ್ಭದಲ್ಲಿ ವೈದ್ಯಕೀಯ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿರುವ ಡಾ.ಶೋಭಾಗುಡಿ, ಡಾ.ಮಂಜುಳಾ ಪಾಟೀಲ್ ಹಾಗೂ ಶ್ರೀಮತಿ ಗೌರಿ ಯವರನ್ನು ಆತ್ಮೀಯವಾಗಿ ಗೌರವಿಸಿ, ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸಂಸ್ಥೆಯ ಕಾರ್ಯ ಯೋಜನೆಗಳಲ್ಲಿ ಕೈಜೋಡಿಸಿರುವ ಹಲವಾರು ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವೈದ್ಯರುಗಳು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.