ದೊಡ್ಡಬಳ್ಳಾಪುರ: ನಮ್ಮ ಸಂವಿಧಾನವು ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜೆಸಿಐಯುಟಿ ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್ ತಿಳಿಸಿದರು.
ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಮ್ಮ ಸಂವಿಧಾನವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿದೆ. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳು, ಶಿಕ್ಷಣ ಹಕ್ಕು ಗಳು, ಧಾರ್ಮಿಕ ಹಕ್ಕುಗಳು ದೊರಕಿವೆ.. ಆದ್ದರಿಂದ ನಮ್ಮ ದೇಶದ ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು ಎಂದರು.
ಕಿರುತೆರೆ ಬಾಲನಟಿ ಮತ್ತು ವಿದ್ಯಾರ್ಥಿನಿ ಗಮನಗೌಡ ಮಾತನಾಡಿ, ಭಾರತದ ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಹತ್ವದ ಪಾತ್ರ ವಹಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ನೀಡಿದ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ವಿಚಾರಗಳು ಎಂದಿಗೂ ಪ್ರಸ್ತುತ ಎನಿಸುತ್ತದೆ.
ಗಣರಾಜ್ಯೋತ್ಸವ ದಿನಾಚರಣೆ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಮಹತ್ವದ ದಿನವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಕೋಶಾಧ್ಯಕ್ಷ ನಂ.ಮಹಾದೇವ್, ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್,
ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕ ಅಧ್ಯಕ್ಷ ದಾದಾಪೀರ್, ತೂಬಗೆರೆ ಹೋಬಳಿ ಘಟಕದ ಅಧ್ಯಕ್ಷ ಟಿ.ಆರ್.ಕುಮಾರ್, ಗೌರವ ಕಾರ್ಯದರ್ಶಿ ಗಿರೀಶ್ ಎನ್.ಬರಗೂರು, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಮುನಿರಾಜು, ಷಪೀರ್, ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಾದ ರೇಣುಕಾರಾಧ್ಯ, ಅನಿಲ್ ಗುಪ್ತಾ, ಸಾಧಿಕ್, ನರೇಂದ್ರಕುಮಾರ್ ಮೊದಲಾದವರು ಭಾಗವಹಿಸಿದ್ದರು.