ಮುಂಬೈ: ಮುಂಬೈನಲ್ಲಂತೂ ಮಳೆ ರೌದ್ರನರ್ತನ ತಾಳಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಭಾರೀ ಮಳೆಯಿಂದಾಗಿ ಮುಂಬೈನಲ್ಲಿ ಭಾನುವಾರ ಒಂದೇ ದಿನ ವಿವಿಧೆಡೆ 8 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.ಮುಖುರ್ಡ್ ಪ್ರದೇಶದಲ್ಲಿ ಚಾಲ್ ಕಟ್ಟಡದ ಒಂದು ಭಾಗ ಕುಸಿದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮರ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದರೆ ಕಟ್ಟಡದ ಗ್ರಿಲ್ ಪಾದಚಾರಿ ಮಾರ್ಗದ ಮೇಲೆ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವು ಭಾಗಗಳಲ್ಲಿ 200 ಮಿ.ಮೀ ನಿಂದ 300 ಮಿ.ಮೀ ನಷ್ಟು ದಾಖಲೆ ಪ್ರಮಾಣದ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮುಂಬೈಗೆ `ಆರೆಂಜ್ ಅಲರ್ಟ್’ ಘೋಷಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಗಂಟೆಗೆ 60-70 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹಾಗೂ ಅತಿ ಹೆಚ್ಚು ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ.



