ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡ ಟಿ20 ಸರಣಿಗಾಗಿ ಸಜ್ಜಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ವಿಶ್ವಕಪ್?ನಲ್ಲಿ ಕಣಕ್ಕಿಳಿದಿದ್ದ 8 ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ.
ಇನ್ನು ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇನ್ನುಳಿದ ಎರಡು ಮ್ಯಾಚ್ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮೂವರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ನ್ಯೂಝಿಲೆಂಡ್ ತಂಡ ಈ ಕೆಳಗಿನಂತಿದೆ
ಮಿಚೆಲ್ ಸ್ಯಾಂಟ್ನರ್ (ನಾಯಕ), ಕ್ಯಾಟೀನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೇನ್ ಕ್ಲೀವರ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಜ್ಯಾಕ್ ಫೌಲ್ಕ್ಸ್, ಬೆವೊನ್ ಜೇಕಬ್ಸ್, ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಜೇಡೆನ್ ಲೆನಾಕ್ಸ್, ಕೋಲ್ ಮೆಕ್ಕೊನಿ, ಜಿಮ್ಮಿ ನೀಶಮ್, ಟಿಮ್ ರಾಬಿನ್ಸನ್, ಬೆನ್ ಸಿಯರ್ಸ್, ನಾಥನ್ ಸ್ಮಿತ್, ಇಶ್ ಸೋಧಿ.
ಅಲಭ್ಯರಾಗಿರುವ ಆಟಗಾರರು: ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಟಿಮ್ ಸೈಫರ್ಟ್, ಜೇಕಬ್ ಡಫಿ, ಮ್ಯಾಟ್ ಹೆನ್ರಿ
5 ಪಂದ್ಯಗಳ ಸರಣಿ:
ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ನ್ಯೂಝಿಲೆಂಡ್ನಲ್ಲಿ ನಡೆಯಲಿರುವ ಈ ಸರಣಿಯು ಮಾರ್ಚ್ 15 ರಿಂದ ಶುರುವಾಗಲಿದೆ. ಇನ್ನು ಈ ಸರಣಿಯ ಕೊನೆಯ ಮ್ಯಾಚ್ ಮಾರ್ಚ್ 25 ರಂದು ನಡೆಯಲಿದೆ.
ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!



