ಥಾಣೆ : ಮಹಾರಾಷ್ಟ್ರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 9 ಜನ ದುರ್ಮರಣ ಹೊಂದಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆ ಭಿವಂಡಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯ ವಿದ್ಯುತ್ ಮಗ್ಗ ಪಟ್ಟಣದಲ್ಲಿ ನಾಲ್ಕು ಅಂತಸ್ತಿನ ಕೊಹಿನೂರ್ ಕಟ್ಟಡದಒಂದು ಭಾಗ ಕುಸಿದು 9 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ.



