ಚಿಕ್ಕಬಳ್ಳಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರುಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ನ್ಯಾಯ ವಿಭಾಗದ ರಾಜ್ಯಾಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ರವರು ಎಂ.ಎನ್.ದಯಾನಂದ ರವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಸಾಮಾಜಿಕ ನ್ಯಾಯ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಶ್ರೀಯುತ ದಯಾನಂದರವರು ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾಗಿ, ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದು, ನಿರಂತರವಾಗಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸುಮಾರು 25 ವರ್ಷಗಳ ಕಾಲ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ನ್ಯಾಯ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.
ಇವರ ಆಯ್ಕೆಗೆ ಕಾರಣೀಭೂತರಾದ ಎಲ್ಲಾ ನಾಯಕರಿಗೂ ಧನ್ಯವಾದಗಳು ತಿಳಿಸಿದ ದಯಾನಂದ್ ರವರು ಮುಂಬರುವ ಚುನಾವಣೆಗಳಲ್ಲಿ ಹೆಚ್ಚಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು, ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಎಸ್.ಪಿ.ಶ್ರೀನಿವಾಸ್ಎಂ.ವೆಂಕಟೇಶ್, ಶ್ರೀಧರ್, ಪಿ.ಎಸ್.ಮಂಜುನಾಥ್, ಎಂ.ನವೀನ್, ಮಂಡಿಕಲ್ ನವೀನ್, ಸುಬ್ರಮಣಿ, ನಾರಾಯಣಸ್ವಾಮಿ, ಕಾಕಲಚಿಂತೆ ಶ್ರೀಧರ್ ಮತ್ತು ಇತರರು ಇದ್ದರು.