ಧಾರವಾಡ: ಲಿಂಗಾಯತ ಮತಗಳು ಅಧಿಕವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿ ಕಣದಲ್ಲಿದ್ದಾರೆ.
ಈ ನಡುವೆ ಧಾರವಾಡ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ವೀರಶೈವ ಲಿಂಗಾಯತ ಸಮುದಾಯದ ಶಿರಹಟ್ಟಿ ಮಠದ ಪೀಠಾಧಿಪತಿ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಲಿಂಗಾಯತ ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಗದಗ ಜಿಲ್ಲೆಯ ಶಿರಹಟ್ಟಿ ಮಠದ ಪೀಠಾಧಿಪತಿಯಾಗಿರುವ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮದ ಭಕ್ತರು ಒತ್ತಾಯಿಸಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಐದು ಲಕ್ಷಕ್ಕೂ ಹೆಚ್ಚು ಲಿಂಗಾಯತ ಮತಗಳಿವೆ. ಇದೇ ಕಾರಣಕ್ಕೆ ಸ್ಪರ್ಧೆ ಮಾಡುವಂತೆ ಸ್ವಾಮೀಜಿಗೆ ವಿವಿದ ಲಿಂಗಾಯತ ಮುಖಂಡರು ಹಾಗೂ ಭಕ್ತರು ಒತ್ತಾಯಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.