ಬೆಂಗಳೂರು: 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಬೂತಿನಲ್ಲು ಸಹ ಮರು ಮತದಾನ ನಡೆಯದಂತೆ ಶಾಂತಿಯುತವಾಗಿ ಚುನಾವಣೆ ನಡೆಸಿದ್ದಕ್ಕೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಭಿನಂದ-ನಾರ್ಹವಾಗಿರುತ್ತದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಪೊಲೀಸ್ ಧ್ವಜ ದಿನಾಚರಣೆಯ ಪ್ರಯುಕ್ತ ಕೋರಮಂಗಲದ ಕೆಎಸ್ಆರ್ಪಿ ಕ್ರೀಡಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದ ಸಮಾರಂಭದಲ್ಲಿ ವಂದನೆ ಸ್ವೀಕರಿಸಿ ಮಾತನಾಡಿದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ರವರು ಕೇವಲ ಎರಡು ಬಸ್ ಟಿಕೆಟ್ ಗಳಲ್ಲಿ ಮೈಸೂರಿನಲ್ಲಿ ನಡೆದಿದ್ದ ಘೋರ ಅಪರಾಧ ಪ್ರಕರಣವನ್ನು ಪತ್ತೆ ಹಚ್ಚಿದರು ಎಂದು ಶ್ಲಾಘಿಸಿದ್ದಾರೆ.
ಸುಮಾರು ಏಳು ವರ್ಷಗಳ ಕಾಲ ರಾಜ್ಯ ಪೊಲೀಸ್ ಇಲಾಖೆಯ ಹೆಚ್ಚುವರಿ ಗೃಹ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು ಬಹಳ ಸಂತೋಷ ತಂದಿದೆ. ಕೈಯಲ್ಲಾದಷ್ಟು ಇಲಾಖೆಯ ನೇಮಕಾತಿಯಿಂದ ಹಿಡಿದು ತಂತ್ರಜ್ಞಾನದ ವರಗೂ ಎಲ್ಲಾ ರೀತಿಯ ಸಹಕಾರವನ್ನು ಸಹ ನೀಡಿರುತ್ತೇನೆ ಎಂದು ತಿಳಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಸಹ ಪೊಲೀಸರು ಇದೇ ರೀತಿ ಉತ್ತಮ ಕಾರ್ಯ ನಿರ್ವಹಿಸಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಿರಿಯ ಮತ್ತು ಕಿರಿಯಾ ಅಧಿಕಾರಿಗಳು ಉಪಸ್ಥಿತರಿದ್ದರು.