ಹೊಸದಿಲ್ಲಿ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ವಿಶಾಖಪಟ್ಟಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಕಾಯ್ದುಕೊಂಡ ತಪ್ಪಿಗೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ರವಿವಾರ ನಡೆದ ಐಪಿಎಲ್ ನ 13ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ರನ್ ಅಂತರದಿಂದ ರೋಚಕ ಜಯ ದಾಖಲಿಸಿತ್ತು.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಧಾನಗತಿಯ ಬೌಲಿಂಗ್ ಕಾಯ್ದುಕೊಂಡಿದ್ದಕ್ಕೆ ಡೆಲ್ಲಿ ತಂಡದ ನಾಯಕ ರಿಷಭ್ ಪಂತ್ ಗೆ ದಂಡ ವಿಧಿಸಲಾಗಿದೆ. ನಿಧಾನಗತಿಯ ಬೌಲಿಂಗ್ ಗೆ ಸಂಬಂಧಿಸಿ ಐಪಿಎಲ್ ನ ನೀತಿ ಸಂಹಿತೆ ಅಡಿ ಈ ವರ್ಷದ ಐಪಿಎಲ್ ನಲ್ಲಿ ಡೆಲ್ಲಿ ಎಸಗಿರುವ ಮೊದಲ ತಪ್ಪು ಇದಾಗಿದೆ. ಪಂತ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯೊಂದರಲ್ಲಿ ತಿಳಿಸಿದೆ.