ವಿಜಯನಗರ: ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಜಮೀರ್ ಅವರು ಚೇತರಿಸಿಕೊಂಡು ಇಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಪರ ಪ್ರಚಾರ ಮಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಈಗಿನ ಬೆಲೆಗಳೊಂದಿಗೆ ಹೋಲಿಕೆ ಮಾಡಿದ ಜಮೀರ್, ಈಗ ಎಲ್ಲ ಬೆಲೆಗಳು ಎರಡು ಪಟ್ಟು ಹೆಚ್ಚಿವೆ ಅಂತ ಹೇಳಿದರು.
ನಂತರ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡುವಾಗ ಅವರು, ತಮ್ಮ ಗುರು ಸಿಎಂ ಸಿದ್ದರಾಮಯ್ಯನವರ ಶೈಲಿಯನ್ನು ಅನುಕರಿಸಿದರು. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಧಿಕಾರಕ್ಕೆ ಬಂದರೆ, ದೇಶದ ಎಲ್ಲ ಬಡವರ್ಗದ ಮಹಿಳೆಯರಿಗೆ ವಾರ್ಷಿಕ ತಲಾ ಒಂದು ಲಕ್ಷ ರೂ. ಕೊಡುವ ಭರವಸೆಯನ್ನು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೀಡಿದ್ದಾರೆ ಎಂದು ಜಮೀರ್ ಅಹ್ಮದ್ ಹೇಳಿದರು.