ನೆಲಮಂಗಲ : ಕನ್ನಡ ಸಾಹಿತ್ಯ ಪರಿಷತ್ ತನದೇ ಆದ ಇತಿಹಾಸವನ್ನು ಹೊಂದಿದೆ, ಕನ್ನಡ ಭಾಷೆ ನೆಲ ಜಲ ವಿಚಾರದಲ್ಲಿ ನಾನು ಯಾರೊಂದಿಗೂ ರಾಜಿ ಇಲ್ಲ, ಕನ್ನಡ ಸಾಹಿತ್ಯ ಪರಿಷತ್ ಸರ್ಕಾರದ ಅಂಗ ಸಂಸ್ಥೆಯಾಗಿದ್ದು. ಈ ಸಂಸ್ಥೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕ ಎನ್. ಶ್ರೀನಿವಾಸ್ ಭರವಸೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಬೈರನಹಳ್ಳಿ ಪ್ರಕಾಶ್ ಹಾಗೂ ಸದಸ್ಯರುಗಳು ಹಾಲಿ ಶಾಸಕರಾದ ಎನ್.ಶ್ರೀನಿವಾಸ್ ರವರನ್ನು ಸ್ವಗ್ರಾಮದಲ್ಲಿ ಭೇಟಿಯಾಗಿ ತಾಲೂಕು ಸಾಹಿತ್ಯ ಪರಿಷತ್ತಿನ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದರು.ಇದೇ ಸಂದರ್ಭದಲ್ಲಿ ಶಾಸಕ ಎನ್. ಶ್ರೀನಿವಾಸ್ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡನಾಡಿನ ದೊಡ್ಡ ಪ್ರಾತಿನಿಧಿಕ ಸಂಸ್ಥೆ ಆಗಿದೆ.
ಇದು ಮಾತೃ ಭಾಷೆಯನ್ನಾಡುವ ಎಲ್ಲರನ್ನೂ ಒಗ್ಗೂಡಿಸಿದೆ. ಅಲ್ಲದೆ, ಕನ್ನಡ ನಾಡು, ನುಡಿ, ಸಂಸ್ಕೃತಿ ಬೆಳವಣಿಗೆಗೆ ಕೊಡುಗೆ ನೀಡುತ್ತಾ ಬಂದಿರುವುದು ಶ್ಲಾಘನೀಯ, ಭಾಷೆ, ನೆಲ, ಜಲ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ. ಸಾಹಿತ್ಯ ಪರಿಷತ್ ಗ್ರಾಮೀಣ ಭಾಗಕ್ಕೂ ಕೊಂಡೊಯ್ದಿರುವುದು ಉತ್ತಮ ಬೆಳವಣಿಗೆ ಸರ್ಕಾರದಿಂದಲೂ ಹಾಗೂ ವೈಯಕ್ತಿಕವಾಗಿ ಈ ಸಂಸ್ಥೆಗೆ ಸಹಕಾರ ನೀಡಲು ಬದ್ಧನಾಗಿದ್ದೇನೆ, ಅತಿ ಶೀಘ್ರದಲ್ಲೇ ಭವನ ನಿರ್ಮಾಣಕ್ಕೆ ಚಾಲನೆ ನೀಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಭೈರನಹಳ್ಳಿ ಪ್ರಕಾಶ್, ಗೌರವ ಕಾರ್ಯದರ್ಶಿ ವೀರಸಾಗರ ಭಾನುಪ್ರಕಾಶ್, ಸಂಘಟನಾ ಕಾರ್ಯ ದರ್ಶಿ ಅರಸನಕುಂಟೆ ಗುರುಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ರಘು, ಕಸಬಾ ಹೋಬಳಿ ಸಂಘಟನಾ ಕಾರ್ಯದರ್ಶಿ ಶಿವು, ಮತ್ತಿತರರು ಇದ್ದರು.