ಬೆಂಗಳೂರು: 18 ನೇ ಲೋಕಸಭಾ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದ್ದು, ನಿರೀಕ್ಷೆಯಂತೆ ಎನ್ಡಿಎ ಮೈತ್ರಿಕೂಟ ಜಯಗಳಿಸಿದೆ. ಮತ್ತೊಮ್ಮೆ
ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಈ ದೇಶವನ್ನುಅಭಿವೃದ್ಧಿ ಪಥದತ್ತ ಮುನ್ನಡೆಸಲಿ ದ್ದಾರೆ ಎಂದು ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಮಂಡಲ ಅಧ್ಯಕ್ಷರಾದ ಎಚ್ ಎಸ್ ರಾಘವೇಂದ್ರ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.
ನಿನ್ನೆ ನಡೆದ ಚುನಾವಣಾ ಫಲಿತಾಂಶದ ವೇಳೆ ಮಾತನಾಡಿದ ಅವರು ಬಿಜೆಪಿ ಪಕ್ಷಕ್ಕೆ ಪೂರ್ಣ ಬಹುಮತ ಬಾರದಿರುವುದು ಬೇಸರದ ಸಂಗತಿಯಾಗಿದೆ. ಆದ್ರೆ ವಿಶ್ವ ಗುರು ಎಂದೇ ಕರೆಸಿಕೊಳ್ಳುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎನ್ ಡಿ ಎ ಮಿತ್ರಪಕ್ಷಗಳಾದ ತೆಲುಗುದೇಶಂ ಪಾರ್ಟಿ, ಸಂಯುಕ್ತ ಜನತಾದಳ, ಜ್ಯಾತ್ಯಾತೀತ ಜನತಾದಳ ಜನಸೇನಾ ಶಿವಸೇನಾ ಸೇರಿದಂತೆ ಹಲವು ಪಕ್ಷಗಳ ಜೊತೆ ಸೇರಿ 3 ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ನಗರದಲ್ಲಿ ಬಿಜೆಪಿ ತನ್ನ ಗೆಲುವಿನ ನಾಗಾಲೋಟ ಮುಂದುವರಿಸಿರುವುದು ಬಹಳ ಸಂತೋಷ ತಂದಿದೆ. ವಿಶೇಷವಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅವರು 2 ಲಕ್ಷ 58ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ನಮ್ಮ ಭಾಗಕ್ಕೆ ಸಿಕ್ಕ ಅತೀ ದೊಡ್ಡ ಜಯ ಎಂದ್ರೆ ತಪ್ಪಾಗಲ್ಲ, ನಮ್ಮ ಕ್ಷೇತ್ರದಲ್ಲಿ ಮಾಜಿ ಸಚಿವರು ಹಾಗೂ ಜನಪ್ರಿಯ ಶಾಸಕರಾದ ಕೆ ಗೋಪಾಲಯ್ಯ ರವರ ನೇತೃತ್ವದಲ್ಲಿ ಜೆಡಿಎಸ್ ಬಿಜೆಪಿ ಪಕ್ಷದ ಎಲ್ಲ ಮುಖಂಡರು ಕಾರ್ಯಕರ್ತರು ಈ ಚುನಾವಣೆಯಲ್ಲಿ ಹಗಲಿರುಳು ಕೆಲಸ ಮಾಡಿದ್ದರಿಂದ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಹೀಗಾಗಿ ಕ್ಷೇತ್ರದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ರಾಘವೇಂದ್ರ ಶೆಟ್ಟಿ ಅವರು ಈ ವಿಶೇಷ ಸುಸಂದರ್ಭದಲ್ಲಿ ನಮ್ಮ ಕ್ಷೇತ್ರದ ಪರವಾಗಿ ಈ ಚುನಾವಣೆಯಲ್ಲಿ ಜಯಗಳಿಸಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೃದಯವಂತ ಡಾಕ್ಟರ್ ಎಂದೇ ಕರೆಸಿಕೊಳ್ಳುವ ಡಾ, ಸಿ ಎನ್ ಮಂಜುನಾಥ್, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ ಸಿ ಮೋಹನ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ರಾಘವೇಂದ್ರ ಶೆಟ್ಟಿ ಅವರು ಮಾಧ್ಯಮಕ್ಕೆ ತಮ್ಮ ಸಂತಸ ಹಂಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.