ಬೆಂಗಳೂರು: ಇತ್ತೀಚೆಗೆ ವಿಧಾನಸಭೆ ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ಗೆ ಆಯ್ಕೆಯಾದ ನೂತನ ವಿಧಾನಪರಿಷತ್ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭ ಈ ತಿಂಗಳ 24ರ ಸೋಮವಾರ ನಡೆಯಲಿದೆ ಎಂದು ತಿಳಿದುಬಂದಿದೆ.
24ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣ ವಚನ ಭೋದಿಸಲಿದ್ದಾರೆ.ವಿಧಾನಸೌಧದಲ್ಲಿರುವ ಬ್ಯಾಂಕ್ವೇಟ್ ಹಾಲ್ನಲ್ಲಿ ಸಮಾರಂಭ ನಡೆಯಲಿದ್ದು, ಇಂದು ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸಮಾರಂಭದ ಸ್ಥಳವನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಸಭಾಪತಿ ಅವರ ಆಪ್ತ ಕಾರ್ಯದರ್ಶಿ ಶೈಲಜಾ ಅವರು ಹಾಜರಿದ್ದರು.
ಇತ್ತೀಚೆಗೆ ವಿಧಾನಸಭೆಯಿಂದ 11 ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ತಲಾ ಮೂವರಂತೆ ಒಟ್ಟು 17 ಮಂದಿ ವಿಧಾನಪರಿಷತ್ಗೆ ನೂತನವಾಗಿ ಆಯ್ಕೆಯಾಗಿದ್ದಾರೆ.
ಪ್ರಮಾಣವಚನ ಸಮಾರಂಭ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದರು.