ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದಿದ್ದ ಘರ್ಷಣೆ ಅಹಿತಕರ ಘಟನೆ ಸಂಬಂಧ ತನಿಖೆ ನಡೆಸಿ ವರದಿ ಸಿದ್ದಪಡಿಸಲು ಬಿಜೆಪಿಯಿಂದ ರಚನೆ ಯಾಗಿದ್ದ ಸತ್ಯಶೋಧನಾ ಸಮಿತಿ ನಾಗ ಮಂಗಲಕ್ಕಿಂದು ಭೇಟಿ ನೀಡಿದೆ.
ಶಾಸಕ ಡಾ.ಸಿ.ಎನ್. ಅಶ್ವತ್ಥ್ನಾರಾಯಣ್ ನೇತೃತ್ವದ ಸತ್ಯಶೋಧನಾ ಸಮಿತಿ ಘಟನೆ ನಡೆದ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿ ವರದಿಯನ್ನು ಸಿದ್ಧಪಡಿಸಿ ಪಕ್ಷ ಹಾಗೂ ಸರ್ಕಾರಕ್ಕೆ ನೀಡುವುದಾಗಿ ತಿಳಿಸಿದೆ.
ನಾಗಮಂಗಲದಲ್ಲಿಂದು ಮಾತನಾಡಿರುವ ಡಾ.ಸಿ.ಎನ್. ಅಶ್ವತ್ಥ್ನಾರಾಯಣ್ ಘಟನೆ ಸಂದರ್ಭದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಎಂದು ಪಿಎಫ್ಐ ಸಂಘಟನೆ ಅವರ ಕೈವಾಡವಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಸತ್ಯಾಸತ್ಯತೆಗಳನ್ನು ಪರಿಶೀಲನೆ ಮಾಡಲಾಗುವುದು ಎಂದು ಹೇಳಿದ್ದಾರೆ.