ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನತೆ ಆಶೀರ್ವಾದ ಮಾಡಿದಲ್ಲಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ರಾಮಪ್ಪ ಹೇಳಿದರು.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಅವರ ಸ್ವಗ್ರಾಮ ನೇರಲಗುಂಟೆ ಗ್ರಾಮದ ಗ್ರಾಮ ದೇವತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರ ಜೊತೆ ಪೂಜೆ ಸಲ್ಲಿಸಿ. ಪತ್ರಕರ್ತರ ಜೊತೆ ಮಾತನಾ ಡುತ್ತ.
ನಾನು ಚಿತ್ರದುರ್ಗ ಜಿಲ್ಲೆಯವನಾಗಿದ್ದು. ಸ್ಥಳೀಯವಾಗಿ ಕ್ಷೇತ್ರದಲ್ಲಿರುವ ಸಮಸ್ಯೆಗಳ ಹರಿವು ನನ್ನಲ್ಲಿದೆ.
ಅತ್ಯಂತ ಹಿಂದುಳಿದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಹಾಗೂ ಹಿಂದುಳಿದ ಸಮಾಜದ ಜನರೇ ಹೆಚ್ಚಾಗಿದ್ದು. ಈ ಕ್ಷೇತ್ರದಲ್ಲಿ ವಿದ್ಯಾವಂತ ನಿರುದ್ಯೋಗಿ ಯುವಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು. ಇಲ್ಲಿ ಉದ್ಯೋಗ ಸೃಷ್ಟಿಯ ಅವಶ್ಯಕತೆ ಇದೆ. ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿದರೆ.ಕ್ಷೇತ್ರದಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಿ. ನಿರುದ್ಯೋಗ ಸಮಸ್ಯೆ ನೀವಾರಿಸುತ್ತೇನೆ.
ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ. ನಾನು ಜಿಲ್ಲೆಯವನೇ ಅದ್ದರಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖಂಡರು ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೈಕಮಾಂಡ್ ಮುಖಂಡರಾದ ರಾಹುಲ್ ಗಾಂಧಿ ಸೇರಿದಂತೆ ಅನೇಕ ಮುಖಂಡರು ನನಗೆ 2024ರಲ್ಲಿ ನೆಡೆಯುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಆದ್ದರಿಂದ ಚಿತ್ರದುರ್ಗ ಕ್ಷೇತ್ರದ ಜನತೆ ಈ ಬಾರಿ ನನ್ನನು ಬೆಂಬಲಿಸುತ್ತಾ ರೆಂದು ಅಪಾರ ನಂಬಿಕೆ ಇದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ರಾಮಪ್ಪನವರು ನಾಯಕನಹಟ್ಟಿ ಹೋಬಳಿಯ ಗ್ರಾಮಗಳಾದ ನಾಯಕನಹಟ್ಟಿ,ಏನ್.ಮಹದೇವಪುರ, ಅಬ್ಬೇನಹಳ್ಳಿ,ಗೌರಿಪುರ ಗ್ರಾಮಗಳಿಗೆ ಮುಖಂಡರ ಜೊತೆ ಭೇಟಿ ಕೊಟ್ಟು ಬೆಂಬಲ ಕೋರಿದರು.
ಈ ಸಂದರ್ಭದಲ್ಲಿ ನಾಯಕನಹಟ್ಟಿ ಹೋಬಳಿಯ ಕಾಂಗ್ರೆಸ್ ಮುಖಂಡರಾದ ಬ್ಯಾಂಕ್ ಸೂರಯ್ಯ, ಜಿ.ಬಿ.ಬಾಲರೆಡ್ಡಿ, ಜಿ.ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ವರವು ಕಾಟಯ್ಯ, ಸೋಮಶೇಖರ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಕೆ.ತಿಪ್ಪೇಸ್ವಾಮಿ, ನೇರಲಗುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಾಲ ನಾಯಕ, ಭೀಮನಕೆರೆ ಪಾಲಯ,ಹಿರೇಹಳ್ಳಿ ಕೃಷ್ಣಪ್ಪ,ಈರಣ್ಣ ಇತರ ಮುಖಂಡರು ಉಪಸ್ಥಿತರಿದ್ದರು.