ಬೆಳಗಾವಿ: ಇಂದು ಬಹುನಿರೀಕ್ಷಿತ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸಂಜೆ 7 ಘಂಟೆಗೆ ಬೆಳಗಾವಿಯ ಖಾಸಗಿ ಹೊಟೇಲ್ನಲ್ಲಿ ಸಭೆ ನಿಗದಿಯಾಗಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುತ್ತಿರುವ ಶಾಸಕಾಂಗ ಪಕ್ಷದ ಸಭೆ ಭಾರಿ ಮಹತ್ವ ಪಡೆದುಕೊಂಡಿದ್ದು ಸರ್ಕಾರದ ವಿರುದ್ಧ ಉಳಿದಿರುವ ಸದನ ಕಲಾಪದ ಸಮಯದಲ್ಲಿ ಬಳಸಬೇಕಾದ ಅಸ್ತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ನಾಳೆ ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ನಡೆಸಲಿರುವ ಪ್ರತಿಭಟನೆಯ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.