ಬೇಲೂರು: ತನ್ನನ್ನು ಪ್ರೀತಿಸುವಂತೆ ಯುವನೋರ್ವ ಕಿರುಕುಳ ನೀಡುತ್ತಿದ್ದು, ಇದರಿಂದ ನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಿಡುಗೂಡು ಗ್ರಾಮದಲ್ಲಿ ನಡೆದಿದೆ.
ಸಂಗೀತ(21) ಎಂಬಾಕೆಯೇ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿ ಸಾವನ್ನಪ್ಪಿದ್ದಾಳೆ. ಮೃತಳು ಬಿಕಾಂ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದಳು ಎಂದು ಹೇಳಲಾಗಿದೆ.
ಶಿವು ಎಂಬಾತ ಆಕೆಯನ್ನು ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದು, ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಯೂ ನಡೆಸಿದ್ದು, ಕೊಲೆ ಮಾಡುವ ಬೆದರಿಕೆಯೊಡ್ಡಿದ್ದ ಪರಿಣಾಮ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾ ಗಿದ್ದು, ಬೇಲೂರು ಪೊಲೀಸ್ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.