ಬೆಂಗಳೂರು: ಬೆಂಗಳೂರು ಗ್ರಾಮಾಂತರ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ್ಯೋತಿ(23) ಎಂಬ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಿರಣ್ ಎಂಬ ಹುಡುಗನೊಂ ದಿಗೆ ಮದುವೆಯಾಗಿದ್ದ ಜ್ಯೋತಿ ಅತ್ತೆ ಮಾವ ಬೈದರೆಂಬಕಾರಣಕ್ಕಾಗಿ ವಿಷ ಸೇವಿಸಿ.ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿರುತ್ತಾರೆ .
ಕಿರಣ್ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿರುತ್ತಾರೆ. ತ್ಯಾಮಗೊಂಡ್ಲು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿರುತ್ತಾರೆ.