ಹೊಸಕೋಟೆ: ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ 85ನ್ನು ನಾಲ್ಕು ಪಥದ ರಸ್ತೆಯನ್ನಾಗಿ ನಿರ್ಮಾಣ ಮಾಡಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಲೋಕಸಭಾ ಸದಸ್ಯ ಬಿ.ಎನ್ ಬಚ್ಚೇಗೌಡ ತಿಳಿಸಿದರು.
ನಗರದ ಸಂತೆ ಗೇಟ್ ಬಳಿ ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ 20 ಕಿಮೀ ವ್ಯಾಪ್ತಿಯ ರಸ್ತೆಯನ್ನು 39 ಕೋಟಿ ರೂ.ಗಳ ವೆಚ್ಚದ ಮರುಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಹೊಸಕೋಟೆ ನಗರದಲ್ಲಿ ವಾಹನ ದಟ್ಟಣೆಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸಕೋಟೆ ಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯನ್ನ ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವನಿತಿನ್ ಗಡ್ಕರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು ತ್ವರಿತವಾಗಿ ರಸ್ತೆ ಮೇಲ್ದರ್ಜೆಗೇರಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.ಬೆಂಗಳೂರಿನಿಂದ ಹೊಸಕೋಟೆ ಮಾರ್ಗವಾಗಿ ಆಂಧ್ರಪ್ರದೇಶದ ಕಡಪ, ಅಮರಾವತಿಗೆ ಸಂಪರ್ಕ ಕಲ್ಪಿಸಲು ಚತುಷ್ಟಥ ರಸ್ತೆ ಅನುಕೂಲವಾಗಲಿದೆ ಮೊದಲ ಹಂತದಲ್ಲಿ ಮರುಡಾಂಬರಿಕರಣ ಮಾಡಲಾಗುವುದು.
ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಿಂದ ಚಿಂತಾಮಣಿಗೆ ಸಂಪರ್ಕ ಇನ್ನಷ್ಟು ಸುಲಭವಾಗಲಿದೆ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸಲು ಕೇಂದ್ರ ಸಚಿವ ಗಡ್ಕರಿ ಅವರಿಗೆ ಮನವಿಯನ್ನು ಸಲ್ಲಿಸಲಾಗಿದೆ. ಹೊಸಕೋಟೆಯಿಂದ ಅತ್ತಿಬೆಲೆಗೆ ಸಂಪರ್ಕಿಸುವ ಸುಮಾರು 40ಕಿಲೋ ಮೀಟರ್ ರಸ್ತೆಯನ್ನ 16.5 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಪ್ರಾರಂಭ ಮಾಡಲಾಗುವುದು.
ದಾಬಸ್ ಪೇಟೆಯಿಂದ ಹೊಸಕೋಟೆಗೆ ಸಂಪರ್ಕ ರಸ್ತೆಹಾಗೂ ಹೊಸಕೋಟೆಯಿಂದ ಚೆನ್ನೈ ಸೂಪರ್ ಎಕ್ಸ್ಪ್ರೆಸ್ ಹೈವೇಯನ್ನ ಕೇಂದ್ರ ಸರ್ಕಾರ ಸುಮಾರು 19.5 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ದಿಪಡಿಸುತ್ತಿದೆ. ಹೊಸಕೋಟೆಯಿಂದ ಚೆನ್ನೈ ವರೆಗೆ ರಸ್ತೆಯ ಅಕ್ಕಪಕ್ಕ ಸರ್ವಿಸ್ ರಸ್ತೆಗೆ ಸುಮಾರು 2,000 ಕೋಟಿ ರೂ.ಗಳಹೆಚ್ಚುವರಿ ಹಣ ಬಿಡುಗಡೆಗೆ ಈಗಾಗಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಶಾಸಕ ಶರತ್ ಬಚ್ಚೇಗೌಡ ಮಾತನಾಡಿ ವಿಜಯಪುರದಿಂದ ಹೊಸಕೋಟೆ ಮಾರ್ಗವಾಗಿ ಮಾಲೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ
ಯನ್ನು 1,875 ಕೋಟಿ ರೂ ವೆಚ್ಚದಲ್ಲಿ ಅಭಿ ವೃದ್ಧಿಪಡಿಸಲು ಹಾಗೂ ಹೊಸಕೋಟೆಯಿಂದ ಮಾಲೂರಿಗೆ ನಾಲ್ಕು ಪಥದ ಹೈವೇಯನ್ನು 60 ಕೋಟಿ ರೂ, ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ವಿವರವಾದ ಯೋಜನಾ ವರದಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ, ರಾಜ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲ್ ಗೌಡ, ಮುಖಂಡರಾದ ಬಿ.ವಿ. ಬೈರೇಗೌಡ, ಬಿ.ಜಿ. ನಾರಾಯಣಗೌಡ, ಹಾಪ್ಕಾಮ್ಸ್ ನಿರ್ದೇಶಕ ವೆಂಕಟೇಶಪ್ಪ, ಮಾತಂಗ ಫೌಂಡೇಶನ್ ಉಪಾಧ್ಯಕ್ಷ ಎಚ್.ಎಂ.ಸುಬ್ಬರಾಜು, ನಗರಸಭೆ ಸದಸ್ಯ ಕೇಶವಮೂರ್ತಿ, ಗೌತಮ್, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎನ್.ಮಂಜುನಾಥ್, ಮುಖಂಡರಾದ ವಿಜಯಕುಮಾರ್ ಡಿ.ಟಿ.ವೆಂಕಟೇಶ್, ರಾಜಗೋಪಾಲ್, ಪಿಲ್ಲಗುಂಪೆ ವಿಶ್ವನಾಥ್ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.