ಕೋಲಾರ: ರಾಜ್ಯ ಕಾಂಗ್ರೆಸ್ ಸರಕಾರ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಮಂಜೂರಾದ ಅನುದಾನವನ್ನು ಇತರೇ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಪಕ್ಷದ ಬ್ಯಾನರ್ ನಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಹಾಗೂ ರಾಜ್ಯದ ಸಿಎಂ ಹಾಗೂ ಡಿಸಿಎಂ ರ ಭಾವಚಿತ್ರಗಳಿಗೆ ರಾಕ್ಷಸರ ರೂಪವನ್ನು ಹಾಕಿ, ಸಂಸದ ಮುನಿಸ್ವಾಮಿ ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ನಗರದ ಹೊಸ ಬಸ್ ಸ್ಟ್ಯಾಂಡ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ರಾಜ್ಯ ಸರಕಾರದ ವಿರುದ್ಧ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದರು.
ಸಂಸದ ಎಸ್.ಮುನಿಸ್ವಾಮಿ ಮಾತನಾಡಿ ಕಾಂಗ್ರೆಸ್ ಸರ್ಕಾರ ತನ್ನ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಿಜೆಪಿ ಸರ್ಕಾರದಲ್ಲಿ ಮೀಸಲಿಟ್ಟಿದ್ದ ಎಸ್ಸಿ ಎಸ್ಟಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡು, ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಜನತೆಯ ಕ್ಷಮೆಯಾಚಿಸಿ, ಕೂಡಲೇ ಅವರು ತಮ್ಮ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ದಲಿತರಿಗೆ ಮೀಸಲಿಟ್ಟ ಹಣವನ್ನು ಕೂಡಲೇ ಹಿಂದುರಿಸಗಿಬೇಕು. ಇಲ್ಲದಿದ್ದರೆ ರಾಜ್ಯಮುಖಂಡರ ಜೊತೆ ಪ್ರತಿ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿದೊಡ್ಡ ಮಟ್ಟದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಸರ್ಕಾರವು ಮುಜರಾಯಿ ದೇವಸ್ಥಾನಗಳ ಹಣವನ್ನು ಯಾವ ರೀತಿ ಖಾತೆಗೆ ಹಾಕಿಕೊಳ್ಳುತ್ತದೊ, ಅದೇ ರೀತಿ ತಾಕತ್ತು ಮತ್ತು ದಮ್ಮು ಇದ್ದರೆ ಮಸೀದಿ ಮತ್ತು ಚರ್ಚೆಗಳಿಗೆ ಬರುವ ಆದಾಯದ ಹಣವನ್ನು ವಶಪಡಿಸಿಕೊಳ್ಳಲಿ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ದಲಿತರಿಗೆ ಹಿಂದುಳಿದ ವರ್ಗದವರಿಗೆ ಮತ್ತು ಬಹುಸಂಖ್ಯಾತರ ಅಭಿವೃದ್ಧಿ ಕಾರ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕೊಬೋಡಿ ನಾರಾಯಣಸ್ವಾಮಿ ವಿಜಯ ಕುಮಾರ್, ಮಮತಾ ಗೌಡ, ಅರುಣ, ಓಂ ಶಕ್ತಿಚಲಪತಿ ಇತರರು ಇದ್ದರು.