ಬೆಂಗಳೂರು: ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿಪಕ್ಷ ಬಿಜೆಪಿ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ಆರಂಭಿಸಿದೆ.
ರಾಜ್ಯಸಭಾ ಚುನಾವಣೆ ಗೆಲುವಿನ ಸಂಭ್ರಮದ ವೇಳೆ ವಿಧಾನಸೌಧದಲ್ಲಿ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳದೇ ವಿಚಾರಣೆ ನಡೆಸಿ ಕಳುಹಿಸಿದ್ದಾರೆ ಎಂದು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.
ಘಟನೆ ನಡೆದು ಎರಡು ದಿನ ಕಳೆದರೂ ಆರೋಪಿಯನ್ನು ಬಂಧಿಸಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಆಗ್ರಹಿಸಿದ್ದಾರೆ.ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲು ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಬಿಜೆಪಿ-ಜೆಡಿಎಸ್ ಸದಸ್ಯರು ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ರಾಜಭವನದವರೆಗೆ ಪಾದಯಾತ್ರೆ ತೆರಳಿದ್ದಾರೆ.
ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ಮನವಿ ಮಾಡಿದ್ದಾರೆ.