ಬೆಂಗಳೂರು: ಥಾರ್ ಜಿಪ್ ಹರಿದು 10 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಲಿಖಿತ(10) ಸಾವನ್ನಪ್ಪಿರುವ ದುರ್ದೈವಿ ಬಾಲಕಿಯಾಗಿದ್ದಾಳೆ.ದೊಡ್ಡಮ್ಮ ಜೊತೆ ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ನೆಲಮಂಗಲ ಮಾರ್ಗದಿಂದ ಥಾರ್ ಜೀಪ್ ಕುಣಿಗಲ್ ಕಡೆಗೆ ತೆರಳುತ್ತಿತ್ತು. ಈ ವೇಳೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ದೊಡ್ಡಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



