ಮಂಗಳೂರು: ಪುತ್ತೂರಿನಲ್ಲಿ ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಅಪಘಾತವಾಗಿದೆ. ಪುತ್ತೂರುನಿಂದ ಕುಟುಂಬ ಸಮೇತ ತಿಂಗಳಾಡಿ ಕಡೆಗೆ ಆಟೋ ಚಾಲಕ ತೆರಳುತ್ತಿದ್ದ. ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಕಾರು ಬರುತ್ತಿತ್ತು. ಕಾರು ಮತ್ತು ಆಟೋ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ಅನ್ನು ಓವರ್ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಆಟೋಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಆಟೋ ಚಾಲಕ ಹನೀಫ್ ಬನ್ನೂರು ಅವರ ನಾಲ್ಕೂವರೆ ವರ್ಷದ ಮಗಳು ಶಜ್ವಾ ಫಾತಿಮಾ ದುರ್ಮರಣಕ್ಕೀಡಾಗಿದೆ.
ಹನೀಫ್ ಅವರ ಪತ್ನಿ, ಅತ್ತೆ ಮತ್ತು ಇಬ್ಬರು ಮಕ್ಕಳಿಗೆ ಗಂಭೀರವಾಗಿ ಗಾಯಗಳಾಗಿವೆ. ಈ ಪೈಕಿ ಇಬ್ಬರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ



