This is the title of the web page
This is the title of the web page

`ದೇಶದಲ್ಲಿ ದೊಡ್ಡ ಬದಲಾವಣೆ’

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ನಂತರ ಈ ದೇಶದಲ್ಲಿ ದೊಡ್ಡ ಬದಲಾವಣೆ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ವಿಶ್ವದ ಅತಿ ದೊಡ್ಡ ಪಕ್ಷ ಬಿಜೆಪಿ. ಇಡೀ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ. ಕರ್ನಾಟಕದಲ್ಲೂ ಕೂಡ ಬಹಳ ಆಳವಾಗಿ ಬೇರೂರಿರುವ ಪಕ್ಷವಾಗಿದ್ದು, ಅತ್ಯಂತ ಉತ್ತಮ ಸಂಘಟನೆ ಹೊಂದಿರುವ ಪಕ್ಷ. ಕರ್ನಾಟಕದಲ್ಲಿ ಬಿಜೆಪಿ ಬೆಳೆದು ಬಂದು ತನ್ನದೇ ಆದ ಇತಿಹಾಸವನ್ನು ಹೊಂದಿದ ಏಕಾಂಗಿಯಾಗಿ ಪಕ್ಷ ಬೆಳೆಸಿದವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು. ಅವರ ನೇತೃತ್ವದಲ್ಲಿ ಬಿಜೆಪಿ ಪ್ರತಿ ಬಾರಿಯೂ ಬೆಳೆಯುತ್ತಾ ಬಂದಿದೆ.

ದಿವಂಗತ ಅನಂತ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಳೆದ ಪಕ್ಷ ರೈತರಿಗೆ ವಿಶೇಷ ಬಜೆಟ್ ಕೊಡುವುದರ ಜೊತೆಗೆ ಎಲ್ಲಾ ವರ್ಗಗಳಿಗೂ ಹಲವು ಯೋಜನೆಗಳನ್ನು ನೀಡಿದೆ ಎಂದರು. ದೇಶದಲ್ಲಿ ಇದ್ದ ಯುಪಿಎ ಸರ್ಕಾರ ದೇಶದಲ್ಲಿ ಅಸ್ಥಿರತೆ ಉಂಟು ಮಾಡಿತ್ತು. ಆರ್ಥಿಕವಾಗಿ ಅಸ್ಥಿರತೆ ಉಂಟಾಗಿ ಭ್ರಷ್ಟಾಚಾರದ ಸುರಿಮಳೆಯೇ ಆಯಿತು ಎಂದರು.