ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಪ್ರಯತ್ನಗಳಿಂದಾಗಿ ನೌಕಾಪಡೆಯ ಮಾಜಿ ಸಿಬ್ಬಂದಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಲಾಗಿತ್ತು ಮತ್ತು ಇದೀಗ ಅವರು ಬಿಡುಗಡೆಯಾಗಿದ್ದಾರೆ ಮತ್ತು ನಂತರ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ಸಾಗಿದ್ದಾರೆ.
ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಸೌರಭ್ ವಸಿಷ್ಟ್, ಕಮಾಂಡರ್ ಪೂರ್ಣೇಂದು ತಿವಾರಿ, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಸಂಜೀವ್ ಗುಪ್ತಾ, ಕಮಾಂಡರ್ ಅಮಿತ್ ನಾಗ್ಪಾಲ್ ಮತ್ತು ನಾವಿಕ ರಾಗೇಶ್ ಅವರನ್ನು 2022ರ ಆಗಸ್ಟ್ ನಲ್ಲಿ ಬಂಧಿಸಲಾಗಿತ್ತು ಮತ್ತು ಅಲ್ಲಿಂದೀಚೆಗೆ ಅವರು ಜೈಲಿನಲ್ಲಿದ್ದರು.
2022ರ ಅಕ್ಟೋಬರ್ 26ರಂದು ಕತಾರ್ ನ್ಯಾಯಾಲಯ ಎಲ್ಲಾ 8 ಭಾರತೀಯರಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.
ಕಾಪ್ 28 ಶೃಂಗಸಭೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ನ ಅಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರನ್ನು ಭೇಟಿಯಾಗಿ ಈ ವಿಷಯದ ಬಗ್ಗೆ ಚರ್ಚಿಸಿದ್ದನ್ನು ಸ್ಮರಿಸಬಹುದಾಗಿದೆ. ನಂತರ ಡಿಸೆಂಬರ್ ನಲ್ಲಿ ಮರಣದಂಡನೆ ಶಿಕ್ಷೆಯನ್ನು ಪರಿವರ್ತಿಸಲಾಯಿತು.
ಇದೀಗ ದೇಶಕ್ಕೆ ಮರಳಿದ ನೌಕಾಪಡೆಯ ಯೋಧರು, ತಮ್ಮನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು. “ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ ಎಂಬುದು ನಮಗೆ ತುಂಬಾ ಸಂತೋಷವಾಗಿದೆ. ಖಂಡಿತವಾಗಿಯೂ, ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇವೆ.
ಏಕೆಂದರೆ ಇದು ಅವರ ವೈಯಕ್ತಿಕ ಹಸ್ತಕ್ಷೇಪದಿಂದ ಮಾತ್ರ ಸಾಧ್ಯವಾಯಿತು” ಎಂದು ಯೋಧರಲ್ಲಿ ಒಬ್ಬರು ಹೇಳಿದರು. ಬಿಕ್ಕಟ್ಟಿನ ಸಮಯದಲ್ಲಿ ಭಾರತವು ತನ್ನ ನಾಗರಿಕರನ್ನು ವಿದೇಶದಿಂದ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುತ್ತಿರುವುದು ಇದು ಮೊದಲೇನಲ್ಲ. ಭಾರತವು ತನ್ನ ಪ್ರತಿಯೊಬ್ಬ ನಾಗರಿಕರ ಜೀವನದ ಸುರಕ್ಷತೆಗೆ ಸದಾ ಅಗ್ರ ಆದ್ಯತೆಯನ್ನು ನೀಡುತ್ತಿದೆ.
ಭಾರತದ ಎಲ್ಲಾ ಸಂಭಾವ್ಯ ರಾಜತಾಂತ್ರಿಕ ಮತ್ತು ಮಿಲಿಟರಿ ಕೌಶಲ್ಯಗಳನ್ನು ಬಳಸಿಕೊಂಡು ಅಸಾಧ್ಯವಾದ ಪರಿಸ್ಥಿತಿಗಳಿಂದ ಭಾರತೀಯ ಪ್ರಜೆಗಳನ್ನು ರಕ್ಷಿಸಲು ಮತ್ತು ಸ್ವದೇಶಕ್ಕೆ ವಾಪಸ್ ಕರೆತರಲು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಹಲವು ಪ್ರಮುಖ ವಿಶ್ವ ನಾಯಕರೊಂದಿಗಿನ ಪ್ರಧಾನಮಂತ್ರಿ ಅವರ ವೈಯಕ್ತಿಕ ಸಮೀಕರಣ ಮತ್ತು ಭಾರತದ ಬೆಳೆಯುತ್ತಿರುವ ಅಂತಾರಾಷ್ಟ್ರೀಯ ಸ್ಥಾನಮಾನವು ಸಂಘರ್ಷ ವಲಯಗಳಿಂದ ಸಾವಿರಾರು ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ವಾಪಸ್ ಕರೆ ತರಲು ಪ್ರಮುಖ ಕಾರಣವಾಗಿದೆ.