ಹೊಸದಿಲ್ಲಿ : ರಾಷ್ಟç ರಾಜಧಾನಿ ದಿಲ್ಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟ ಪ್ರಕರಣದ ಕುರಿತು ದಿಲ್ಲಿ ಪೊಲೀಸರು ಯುಎಪಿಎ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಿಲ್ಲಿಯ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಸ್ಪೋಟದಲ್ಲಿ ಒಂಭತ್ತು ಮಂದಿ ಮೃತಪಟ್ಟು, ೨೦ ಮಂದಿ ಗಾಯಗೊಂಡಿದ್ದರು. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಸ್ಫೋಟಕ ಕಾಯ್ದೆ ಮತ್ತು ಬಿಎನ್ಎಸ್ನ ವಿವಿಧ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.



