ನವದೆಹಲಿ: ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಚಿನ್ನ ಖರೀದಿಸಬೇಡಿ, ವಿದೇಶ ಪ್ರವಾಸ ಮಾಡಬೇಡಿ, ಕಡಿಮೆ ಪೆಟ್ರೋಲ್ ಬಳಸಿ ಎಂದು ಸಲಹೆ ನೀಡಿದ್ದನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ. ರಸಗೊಬ್ಬರ ಮತ್ತು ಅಡುಗೆ ಎಣ್ಣೆಯನ್ನು ಕಡಿಮೆ ಮಾಡಿ, ಮೆಟ್ರೋದಲ್ಲಿ ಪ್ರಯಾಣಿಸಿ, ಮತ್ತು ಮನೆಯಿಂದಲೇ ಕೆಲಸ ಮಾಡಿ ಎಂದು ಧರ್ಮೋಪದೇಶ ನೀಡಿದ್ದಾರೆ.



