ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆಯ ವಿಷಯದ ಬಗ್ಗೆ ಎಐಸಿಸಿ ಪ್ರಮುಖ ರಾಹುಲ್ಗಾಂಧಿತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.ನಾಯಕತ್ವ ಬದಲಾವಣೆ ಮಾಡಿದರೆ ಪಕ್ಷದ ಮೇಲಾಗುವ ಪರಿಣಾಮದ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ರಾಜ್ಯ ಸಚಿವ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಗಾಂಧಿ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ರಾಹುಲ್ಗಾಂಧಿ ಅವರು ಪಕ್ಷಕ್ಕೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಎಲ್ಲದರ ನಡುವೆ ನಾಯಕತ್ವ ಬದಲಾವಣೆಯ ಕಗ್ಗಂಟನ್ನು ಬಗೆಹರಿಸುವ ಬಗ್ಗೆ ತಮ್ಮದೇ ಆದ ಫಾರ್ಮುಲಾ ಪ್ರಯೋಗಿಸಲು ಒಂದಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಂಪರ್ಕಸಾಧಿಸಿ ದೂರವಾಣಿ ಮೂಲಕ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಂಪರ್ಕ ಸಾಧಿಸಿ ಸ್ವಲ್ಪ ದಿಸ ಕಾಯಿರಿ ನಾನು ತಮ್ಮೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಹಿರಿಯ ಮುಖಂಡ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ಸಂಪರ್ಕ ಹೊಂದಿ ನಗರದ ಖಾಸಗಿ ಹೋಟೆಲ್ನಲ್ಲಿ ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಈ ರಹಸ್ಯ ಮೃತುಕಠ ಇದೀಗ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ಸತೀಶ್ ಅವರು ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಇಂದು ನಡೆಯಬೇಕಿದ್ದ ಸಮಾನ ಮನಸ್ಕರ ಸಚಿವರ ಭೋಜನಕೂಟ ರದ್ದಾಗಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ತಾವು ರಾಹುಲ್ಗಾಂಧಿ ಅವರನ್ನು ಭೇಟಿಯಾಗಿದ್ದ ಬಗ್ಗೆ ಸಮರ್ಥನೆ ನೀಡಿದ್ದಾರೆ. ರಾಹುಲ್ಗಾಂಧಿ ಅವರು ನಮಗೆ ಸಮಯ ನೀಡಿದ್ದರು. ಹಾಗಾಗಿ ರಾಹುಲ್ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.ಪಕ್ಷದಲ್ಲಿ ಮುಖ್ಯಮಂತ್ರಿ ಆಗುವ ಆಸೆ ಬಹಳ ಮಂದಿಗೆ ಅರ್ಹತೆ ಇದೆ ಎಂದು ಹೇಳುವ ಮೂಲಕ ತಾವು ರಾಹುಲ್ಗಾಂಧಿ ಅವರ ಜತೆ ಮಾತನಾಡಿದ ಕೆಲ ವಿಷಯಗಳನ್ನು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಇಂದು ಸಂಜೆ ಪುನಃ ಬೆಂಗಳೂರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಆಗಮಿಸಿದ್ದು, ನಾಳೆ ನಾಡಿದ್ದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಅತೀ ಶೀಘ್ರದಲ್ಲಿಯೇ ಖರ್ಗೆ ಅವರು ರಾಹುಲ್ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ನಾಯಕತ್ವ ಬದಲಾವಣೆ ವಿಷಯಕ್ಕೆ ತೆರೆ ಬೀಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ.



