ಮೈಸೂರು: ಆತ್ಮಹತ್ಯೆಗೆ ಯತ್ನಿಸಿದ್ದ ರೈತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ.ಹೆಚ್ಡಿ ಕೋಟೆ ತಾಲೂಕಿನ ಕಣಿಯನ ಹುಂಡಿ ಗ್ರಾಮದ ಗಿರಿಗೌಡ(52) ಎಂಬುವರೆ ಮೃತಪಟ್ಟ ದುರ್ದೈವಿ ರೈತ.
ಗಿರಿಗೌಡರಿಗಿದ್ದ 1.5 ಎಕರೆ ಜಮೀನನ್ನು ಭೂಸ್ವಾಧೀನ ಸಂಬಂಧ ಅರಣ್ಯ ಇಲಾಖೆ ವತಿಯಿಂದ ನೋಟೀಸ್ ಜಾರಿಯಾಗಿತ್ತು.
ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ಗಿರಿಗೌಡ ಕೀಟನಾಶಕ ಔಷಧಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೆಆರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದು, ಈ ಸಂಬಂಧ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.