ಬೆಂಗಳೂರು: ಮಚ್ಚಿನಿಂದ ಕೊಚ್ಚಿ ಮಗನನ್ನು ಪಾಪಿ ತಂದೆಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ಸಮೀಪದ ನಾರಾಯಣಪುರದಲ್ಲಿ ನಡೆದಿದೆ.
ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದಾಗ ಮಗ ಸುರೇಶ್ (35) ನನ್ನು ತಂದೆಯೇ ಕೊಲೆಗೈದಿದ್ದಾನೆ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅದೇ ರೀತಿ ನಿನ್ನೆ ಕೂಡ ಕುಡಿದು ಬಂದು ಗಲಾಟೆ ಮಾಡಿದ್ದ. ತಾಯಿಯನ್ನ ಹಿಡಿದು ಹೊಡೆಯುತ್ತಿದ್ದ ಹಿನ್ನೆಲೆಯಲ್ಲಿ ಗಲಾಟೆ ಬಿಡಿಸಲು ತಂದೆ ಮುಂದಾಗಿದ್ದಾರೆ.
ಆದರೆ, ಗಲಾಟೆ ವಿಕೋಪಕ್ಕೆ ತಿರುಗಿದಾಗ ತಂದೆ ಮಚ್ಚಿನಿಂದ ಸುರೇಶ್ಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.