ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿಯಲ್ಲಿರುವ ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸತತ ೧೫ ಗಂಟೆಗಳಿAದ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಸುಮಾರು ೧೫ ಅಗ್ನಿಶಾಮಕ ವಾಹನಗಳಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ನೂರಕ್ಕೂ ಅಧಿಕ ಸಿಬ್ಬಂದಿ ರಾತ್ರಿ ಪೂರ್ತಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಆದರೂ ಸಹ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಅಗ್ನಿ ಅವಘಡದಿಂದ ಫ್ಯಾಕ್ಟರಿಯ ಸುತ್ತಮುತ್ತ ಭಾರೀ ಪ್ರಮಾಣದ ಹೊಗೆ ಆವರಿಸಿದೆ.
ಸೋಮವಾರ ಸಂಜೆ ೦೫:೩೦ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಫ್ಯಾಕ್ಟರಿ ಒಳ ಭಾಗದಿಂದ ಹೊಗೆ ಬರುತ್ತಿವುದರಿಂದ ಕಾರ್ಯಾಚರಣೆಯನ್ನು ಸಿಬ್ಬಂದಿ ಮುಂದುವರಿಸಿದ್ದಾರೆ. ನೀರು ಹಾಯಿಸುವ ಮೂಲಕ ಫ್ಯಾಕ್ಟರಿ ಒಳ ಭಾಗದಲ್ಲಿ ಬರುತ್ತಿರುವ ಹೊಗೆಯನ್ನು ನಿಯಂತ್ರಿಸಲು ಸಿಬ್ಬಂದಿ ಯತ್ನಿಸುತ್ತಿದ್ದಾರೆ.



