ಬೆಂ ಗ್ರಾ ಜಿಲ್ಲೆ: ಬೆಂಗಳೂರು ಭೇಟಿಗಾಗಿ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರು ನಿನ್ನೆ ಫೆಬ್ರವರಿ ೧೯ ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು.
ಗೌರವಾನ್ವಿತ ನೆದರ್ಲ್ಯಾಂಡ್ಸ್ ನ ಪ್ರಧಾನಿಗಳು ಇಂದು ಆರ್.ಟಿ. ನಗರದಲ್ಲಿರುವ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್ , ಇನ್ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ಸಂಚಾರ ಪೊಲೀಸ್ ನಿಯಂತ್ರಣ ಕೇಂದ್ರಕ್ಕೆ , ಭಾರತೀಯ ವಿಜ್ಞಾನ ಸಂಸ್ಥೆ (IISಛಿ) ಗೆ ಭೇಟಿ ನೀಡಿ ನಂತರ ಬೆಂಗಳೂರಿನ ಉದ್ಯಮಿಗಳೊಂದಿಗೆ ಹೋಟೆಲ್ ಫೋರ್ ಸೀಸನ್ಸ್ನಲ್ಲಿ ಮಧ್ಯಾಹ್ನದ ಭೋಜನ ಸಭೆ ನಡೆಸಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಅಮ್ ಸ್ಟರ್ ಡ್ಯಾಮ್ ಗೆ ಪ್ರಯಾಣ ಬೆಳೆಸಿದರು.
ಗೌರವಾನ್ವಿತ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳನ್ನು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಕೆ. ಜಿ ಜಗದೀಶ್, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ



