ಕೋಲಾರ: ಆತ್ಮ ನಿರ್ಭರ ಭಾರತ ಅಭಿಯಾನ – ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ (Pಒಈಒಇ) ಯೋಜನೆಯಡಿ ಸಿರಿಧಾನ್ಯಗಳು ಮತ್ತು ಇತರೆ ಧಾನ್ಯಗಳ ಸಂಸ್ಕರಣೆ, ಬೆಲ್ಲ ನಿಂಬೆ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಕೋಲ್ಡ್ ಪ್ರೆಸ್ಡ್ ಆಯಿಲ್, ಮೆಣಸಿನ ಪುಡಿ ಘಟಕಗಳು, ಶುಂಠಿ ಸಂಸ್ಕರಣಾ ಘಟಕಗಳು, ಅನಾನಸ್ ಸಂಸ್ಕರಣಾ ಘಟಕಗಳು, ಮಸಾಲಾ ಉತ್ಪನ್ನಗಳ ಘಟಕಗಳು, ತೆಂಗಿನ ಉತ್ಪನ್ನಗಳು, ಕುಕ್ಕುಟ ಉತ್ಪನ್ನಗಳು, ಸಾಗರ ಉತ್ಪನ್ನಗಳು, ವಿವಿಧ ಹಣ್ಣು ತರಕಾರಿ ಉತ್ಪನ್ನಗಳು ಹಾಗೂ ಇತರೆ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಹೊಸದಾಗಿ ಪ್ರಾರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ವೈಯಕ್ತಿಕ ಉದ್ದಿಮೆಗಳಿಗೆ ಮಾಲೀಕತ್ವದ ಸಂಸ್ಥೆಗಳಿಗೆ, ಪಾಲುದಾರಿಕೆ ಸಂಸ್ಥೆಗಳಿಗೆ ಖಾಸಗಿ ಸಂಸ್ಥೆಗಳಿಗೆ, ರೈತ ಉತ್ಪಾದಕ ಸಂಸ್ಥೆಗಳಿಗೆ, ಸಕಾರೇತರ ಸಂಸ್ಥೆಗಳಿಗೆ ಮತ್ತು ಸ್ವ-ಸಹಾಯ ಸಂಘಗಳಿಗೆ ಸಾಲ ಸಂಪರ್ಕಿತ ಶೇ.೫೦ ರಷ್ಟು ಅಥವಾ ಗರಿಷ್ಠ ೧೫.೦೦ ಲಕ್ಷಗಳ ಸಹಾಯಧನವನ್ನು ನೀಡಲಾಗುವುದು. ಯೋಜನೆಯಡಿ ಒದಗಿಸುವ ಸಾಲಕ್ಕೆ ಅಉಖಿಒSಇ ಸಂಸ್ಥೆಯಿಂದ ಕ್ರೆಡಿಟ್ ಗ್ಯಾರಂಟಿಯನ್ನು ಒದಗಿಸಲಾಗುತ್ತಿದೆ.
ಅರ್ಜಿಯನ್ನು ಕನಿಷ್ಠ ೧೮ ವರ್ಷ ಮೇಲ್ಪಟ್ಟವರು ರಲ್ಲಿ ಆನ್ಲೈನ್ ಮೂಲಕ ಸಲ್ಲಿಸಬೇಕಾದ ಪ್ಯಾನ್ಕಾರ್ಡ್. ಆಧಾರ್ ಪ್ರತಿ. ವಿಳಾಸ ದೃಢೀಕರಣ ದಾಖಲೆ. ಬ್ಯಾಂಕ್ ಪಾಸ್ ಪುಸ್ತಕ. ಜಿ.ಎಸ್.ಟಿ ಹೊಂದಿರುವ ಯಂತ್ರೋಪಕರಣಗಳ ಧರಪಟ್ಟಿಯನ್ನುಸಲ್ಲಿಸಬೇಕು.
ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತವಾಗಿ ಯೋಜನಾ ಪ್ರಸ್ತಾವನೆ ಸಿದ್ಧತೆ ಮತ್ತು ಅರ್ಜಿ ಸಲ್ಲಿಕೆಗೆ ಸಹಾಯವನ್ನು ಮಾಡಲಾಗುವುದು.
ಜಿಲ್ಲೆಯ ಉದ್ದಿಮೆದಾರರು ಮತ್ತು ಆಸಕ್ತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಅಥವಾ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಸೋಮಶೇಖರ್-೯೭೪೦೮೨೬೩೩೯, ವೆಂಕಟಶಿವಾರೆಡ್ಡಿ-೯೪೮೧೧೦೭೫೨೪ ಯನ್ನು ಸಂಪರ್ಕಿಸಬಹುದೆAದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



