ಬೆಳಗಾವಿ: ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿದ್ದ ಚಾಲಕ ನಿಯಂತ್ರಣ ತಪ್ಪಿ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.



