ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಬಿಟ್ ಕಾಯಿನ್ ಪ್ರಕರಣದ ಸೂತ್ರದಾರ ಶ್ರೀಕಿಗೆ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಲು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ದಳ (ಎಸ್ ಐಟಿ) ಗನ್ ಮ್ಯಾನ್ ನೀಡಿದೆ.
ಶ್ರೀಕಿಗೆ ಕೊಲೆ ಬೆದರಿಕೆಯಿದ್ದು, ಪೊಲೀಸರ ಸಿಗದೇ ತಪ್ಪಿಸಿಕೊಂಡು ಓಡಾಡುತ್ತಿರುವುದರಿಂದ ಎಸ್ಐಟಿ ಶ್ರೀಕಿಗೆ ಗನ್ ಮ್ಯಾನ್ ನೀಡಿದೆ.ವಿಧಾನಸಭಾ ಚುನಾವಣೆಯಲ್ಲಿ ಬಿಟ್ ಕಾಯಿನ್ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು.
ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಸಿಸಿಬಿ ಪೆÇಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.
ಶ್ರೀಕಿಯನ್ನು ಬಳಸಿಕೊಂಡು ರಾಜಕಾರಣಿಗಳು ಬಿಟ್ಕಾಯಿನ್ ಹಗರಣಗಳನ್ನು ಎಸಗಿದ ಆರೋಪವಿದೆ.