ಯಾದಗಿರಿ: ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಮನೆಗೆ ಬೆಂಕಿಹೊತ್ತಿಕೊಂಡು ದಂಪತಿ ಸಜೀವವಾಗಿ ದಹನಗೊಂಡಿರುವ ಘಟನೆ ಸೈದಾಪುರದಲ್ಲಿ ನಡೆದಿದೆ.
ಸೈದಾಪುರದ ರಾಗಯ್ಯ(39), ಶಿಲ್ಪ(35) ಎಂಬುವರೇ ಮನೆಗೆ ಬೆಂಕಿಹೊತ್ತಿಕೊಂಡ ಪರಿಣಾಮ ಬೆಂಕಿಮಧ್ಯೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಗಳು.ಮೃತರು ಮನೆಯಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು ಎನ್ನಲಾಗಿದ್ದು, ಮನೆಗೆ ಬೆಂಕಿ ಹೊತ್ತಿಕೊಂಡ ಕೂಡಲೇ ದಂಪತಿ ಮನೆಯಿಂದ ಹೊರ ಬಾರಲು ಸಾಧ್ಯವಾಗದೆ ಶೌಚಾಲಯದಲ್ಲಿ ಸಿಲುಕಿಕೊಂಡಿದ್ದಾರೆ.
ಎಷ್ಟೇ ಪ್ರಯತ್ನ ಪಟ್ಟರೂ ಹೊರ ಬರಲು ಆಗದೆ ಬೆಂಕಿಯಲ್ಲಿ ಸುಟ್ಟು ಸಾವನ್ನಪ್ಪಿದ್ದಾರೆ. ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Review