ಮಂಗಳೂರು: ಕರಾವಳಿಯಲ್ಲಿ ಮಂಗಳವಾರ ತಡರಾತ್ರಿ ಭಾರಿ ಗಾಳಿ-ಮಳೆ ಸುರಿದಿದೆ. ಗಾಳಿ-ಮಳೆಗೆ ಮಂಗಳೂರಿನ ಕುದ್ರೋಳಿಯ ಬಸವನಗುಡಿ ರಸ್ತೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಇಲ್ಲಿನ ಮನೆಯೊಂದರ ಮೇಲೆ ಬೃಹದಾಕಾರದ ಅಶ್ವತ್ಥ ಮರವೊಂದು ಉರುಳಿ ಬಿದ್ದಿದ್ದು, ಮನೆಯಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



