ಬೆಂಗಳೂರು: ನವೆಂಬರ್ನಲ್ಲಿ ಬಹುದೊಡ್ಡ ಕ್ರಾಂತಿ ಅಗಲಿದೆ ಎಂದು ಕೆಲವು ನಾಯಕರು ಈಗಾಗಲೇ ಭವಿಷ್ಯ ನುಡಿದಿದ್ದರು. ಅದರಂತೆ ನವೆಂಬರ್ನಲ್ಲಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ ೧೫ ರಿಂದ ೨೦ ರ ಒಳಗಾಗಿ ರಾಜ್ಯ ಸಚಿವ
ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಲಾಗುತ್ತಿದೆ. ಹೌದು ನವೆಂಬರ್ ೧೫ ರಿಂದ ೨೦ ರ ನಡುವೆ ರಾಜ್ಯ ರಾಜಕಾರಣದಲ್ಲಿ ಭಾರಿ ಮಹತ್ವದ ಬೆಳವಣಿಗೆ ಆಗುವ ಸಾಧ್ಯತೆ ಇದೆ. ಡಿಸಿಎಂ ಡಿಕೆ ಶಿವಕುಮಾರ್ ಹೆಚ್ಚು ಆಸಕ್ತಿ ವಹಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಡಿಸಿಎಂ ಡಿಕೆ ಶಿವ ಕುಮಾರ್ ತಯಾರಿ
ಮಾಡಿಕೊಂಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಜೊತೆಗೆ ಸಂಪುಟ ಪುನಾರಚನೆ ಬಗ್ಗೆಯೂ ಕೂಡ ಚರ್ಚೆ ನಡೆಸುವ ಸಾಧ್ಯತೆ ಇದೆ.
ಈ ವೇಳೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಿ ಮುಗಿಸುವ ಇರಾದೆ ಹೊಂದಿದ್ದಾರೆ. ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ನವೆಂಬರ್
ಅಂತ್ಯಕ್ಕೆ ತಮ್ಮ ಲೆಕ್ಕಾಚಾರದಲ್ಲಿ ಕಡುಬು ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕಿಂತ ಮುಂಚಿತವಾಗಿಯೇ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಸೂತ್ರ ಹೆಣೆದಿದ್ದಾರೆ. ಇದಕ್ಕೆ ಪೂರಕವಾಗಿ ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಸೂತ್ರದೊಂದಿಗೆ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕಾಯುತ್ತಿದ್ದಾರೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸದ ವೇಳೆ ಕೆಲವು ಮಹತ್ವದ ಬೆಳವಣಿಗೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.