ಚಿತ್ರದುರ್ಗ: ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜಕೀಯ ಪ್ರವೇಶ ಮಾಡಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅವರ ಹಿತೈಷಿ ಆಪ್ತರಿಂದ ಮೇ9ರಂದು ನಡೆಸಲಾಗುತ್ತಿರುವ ಅಭಿಮಾನೋತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ರಾಜ್ಯದ ಎಲ್ಲಾ ಜಿಲ್ಲಾ ತಾಲೂಕಿನಿಂದ ಹಿತೈಷಿ ಅಭಿಮಾನಿಗಳನ್ನು ಸಮಾವೇಶಕ್ಕೆ ತರಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ನಾಳೆ-ನಾಡಿದ್ದು ಬೆಂಗಳೂರಿನಲ್ಲಿ ರಾಜ್ಯ ಮುಖಂಡರ ಸಭೆ ನಡೆದು ಸಭೆಯಲ್ಲಿ ಸಮಾವೇಶ ನಡೆಸುವ ಬಗ್ಗೆ ಸಮಾಲೋಚನೆ ಸಭೆ ನಡೆಯಲಿದೆ.



