ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ. ವೆಂಕಟೇಶ್ (೫೦) ಮೃತ ವ್ಯಕ್ತಿ. ಷೇರು ಮಾರುಕಟ್ಟೆಯಲ್ಲಿ ಲಾಸ್ ಆಗಿದ್ದಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.



