ಉಡುಪಿ: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದ ವ್ಯಕ್ತಿ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3:30 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ತಮ್ಮ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ಅವರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.



