ಬೆಂಗಳೂರು: ವರ್ತೂರು ಗ್ರೌಂಡ್ನಲ್ಲಿ ವ್ಯಕ್ತಿಯ ರುಂಡ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ರುಂಡವನ್ನು ಇಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ರುಂಡ ಪತ್ತೆಯಾದ ಸ್ಥಳದ ಪಕ್ಕದಲ್ಲಿ ರೈಲ್ವೇ ಹಳಿ ಇದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ರುಂಡವನ್ನು ನಾಯಿಗಳು ತಂದಿರಬಹುದು ಎಂದು ಕೆಲವರು ಶಂಕಿಸಿದ್ದಾರೆ. ರುಂಡ ಪತ್ತೆಯಾದ ವ್ಯಕ್ತಿ ಯಾರು ಎಂಬ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆಯೂ ಸರಿಯಾಗಿ ತಿಳಿದು ಬಂದಿಲ್ಲ. ಸ್ಥಳಕ್ಕೆ ವರ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ವರ್ತೂರ್ ಮೈದಾನದಲ್ಲಿ ವ್ಯಕ್ತಿಯ ರುಂಡ ಪತ್ತೆ



