ಬೆಂಗಳೂರು : ಅಪ್ರಾಪ್ತ ಬಾಲಕಿಯೊಬ್ಬಳು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಕಲಾಸಿಪಾಳ್ಯದಲ್ಲಿ ನಡೆದಿದೆ.ಪೋಷಕರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದಾಗ ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಶರ್ಮಿಳಾ (೧೬) ನೇಣಿಗೆ ಶರಣಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.



