“ಮಹಾನ್” ಚಿತ್ರದ ನಾಯಕ ನಟ ವಿಜಯ ರಾಘವೇಂದ್ರ ರೈತರ ಕುರಿತಾದ ಕಥಾಹಂದರದ ಚಿತ್ರದಲ್ಲಿರೈತನ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ವಿಶೇಷ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಶುಭಾಶಯ ತಿಳಿಸಿದೆ. ಪ್ರಕಾಶ್ ಬುದ್ದೂರು ನಿರ್ಮಾಣ ಮಾಡುತ್ತಿದ್ದಾರೆ. ಪಿ.ಸಿ.ಶೇಖರ್ ನಿರ್ದೇಶನ. ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಮುಂತಾದವರು ಅಭಿನಯಿಸಿದ್ದಾರೆ.



