ದೆಹಲಿ: ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಶೀಘ್ರದಲ್ಲಿಯೇ ಪ್ರಾದೇಶಿಕ ಪಕ್ಷವೊಂದನ್ನು ಸ್ಥಾಪಿಸಲಿಸಿದ್ದಾರೆ.
ಈ ವಿಷಯವನ್ನು ಸ್ವತಃ ಅವರೇ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ದೆಹಲಿಗೆ ಭೇಟಿ ನೀಡಿರುವ ಅವರು, ತಾವು ಯಾವುದೇ ತಮ್ಮ ಪಕ್ಷದ ಮುಖಂಡರನ್ನು ಭೇಟಿಯಾಗಲು ದೆಹಲಿಗೆ ಬಂದಿಲ್ಲ. ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಕೇಳಲು ಬಂದಿಲ್ಲ. ತಮ್ಮ ಮಗನ ವಿವಾಹ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ನೀಡಲು ಬಂದಿದ್ದೇನೆ. ಮೂರು ಜನ ಕಡು ಭ್ರಷ್ಟರಿರುವವರೆಗೆ ತಾವು ಬಿಜೆಪಿ ಪಕ್ಷ ಸೇರ್ಪಡೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರಿಬ್ಬರು ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.
ತಾವೇ ನೂತನ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸುವುದಾಗಿ ಹೇಳಿದ ಅವರು, ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ತಾವೇ ಮುಖ್ಯಮಂತ್ರಿಯಾಗುವುದಾಗಿ ಭವಿಷ್ಯ ನುಡಿದಿದ್ದಾರೆ.
ಯತ್ನಾಳ್ರಿಂದ ನೂತನ ಪ್ರಾದೇಶಿಕ ಪಕ್ಷ



