ದೇವನಹಳ್ಳಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯಗಳ ಕಾರ್ಯಕ್ರಮ ವತಿಯಿಂದ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಒಂದು ದಿನದ ಮಾನಸಿಕ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿ ಮಾನಸಿಕ ಖಾಯಿಲೆಗಳ ಲಕ್ಷಣಗಳು, ಚಿಕಿತ್ಸೆ ಕ್ರಮಗಳು, ಒತ್ತಡ ನಿರ್ವಹಣೆ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಶಾಂತಲ ಬಿ.ಎನ್, ಮನೋ ವೈದ್ಯರಾದ ಡಾ.ಗಿರೀಶ್ ಕುಮಾರ್ ಭಾಗವಹಿಸಿದ್ದರು.ಜಿಲ್ಲಾ ವಿಕಲಚೇತನ ಅಧಿಕಾರಿ ಜಗದೀಶ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.