ಚಿಕ್ಕಬಳ್ಳಾಪುರ: ಪ್ರತಿಷ್ಟಿತ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯೊಬ್ಬಳು ೧೪ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ಸರ್ಜಾಪುರ ಮೂಲದ ನಯನಾ (೨೦) ಮೃತಪಟ್ಟಿರುವ ದುರ್ದೈವಿ. ಕಾಲೇಜು ಹಾಸ್ಟೆಲ್ನ ೧೪ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಳು.
೧೪ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬAಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹಾಸ್ಟೆಲ್ನ ೧೪ನೇ ಮಹಡಿಯಿಂದ ಬಿದ್ದು ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಸಾವು!



